ನೆಲಮಂಗಲ (ಬೆಂಗಳೂರು ಗ್ರಾಮಾಂತರ):ಅತಿ ವೇಗವಾಗಿ ಬಂದ ಬೋರ್ ವೇಲ್ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ಸಮೀಪದ ರಾಹುತನಹಳ್ಳಿ ರಸ್ತೆಯಲ್ಲಿ ಇರುವ ಗುಂಡಿಯಲ್ಲಿ ವೇಗವಾಗಿ ಬಂದ ಲಾರಿ ಪಲ್ಟಿಯಾಗಿದೆ. ರಾಹುತನಹಳ್ಳಿ ರಸ್ತೆಯ ಕೆ ಎಂ ವಾಟರ್ ಸರ್ವಿಸ್ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ರಸ್ತೆ ಪಕ್ಕದ ಸರ್ವಿಸ್ ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.