ಕರ್ನಾಟಕ

karnataka

ETV Bharat / state

ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ - ಟ್ರ್ಯಾಕ್ಟರ್ ಗೋಡಾನ್

ಬೆಂಗಳೂರು ಹೆದ್ದಾರಿ ಪಕ್ಕದಲ್ಲೇ ಇರುವ ಮಮತ ಪೆಟ್ರೋಲ್ ಬಂಕ್ ಬಳಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಟೈರ್​ಗಳು ಸುಟ್ಟುಹೋಗಿವೆ.

ಭಾರಿ ಅಗ್ನಿ ಅವಘಡ

By

Published : May 9, 2019, 8:13 AM IST

ದೊಡ್ಡಬಳ್ಳಾಪುರ: ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಟ್ರ್ಯಾಕ್ಟರ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಹೆದ್ದಾರಿ ಪಕ್ಕದಲ್ಲೇ ಇರುವ ಮಮತ ಪೆಟ್ರೋಲ್ ಬಂಕ್ ಬಳಿ ಬೆಂಕಿ ಅನಾಹುತ ಸಂಭವಿಸಿದ್ದು,ಗೋಡೌನ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಟೈರ್​ಗಳು ಸುಟ್ಟು ಭಸ್ಮವಾಗಿವೆ. ಸುದೈವವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಗೋದಾಮಿನಲ್ಲಿ ಅಗ್ನಿ ಅವಘಡ

ಘಟನೆ ನಡೆದ ಸ್ಥಳದಲ್ಲೇ ಪೆಟ್ರೋಲ್ ಬಂಕ್ ಇರುವ ಕಾರಣ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಟೈರ್ ಸುಟ್ಟ ಹಿನ್ನೆಲೆಯಲ್ಲಿಆವರಿಸಿದ ದಟ್ಟ ಹೊಗೆ ಹಾಗೂ ವಾಸನೆಯ ಕಾರಣ ಜನರಿಗೆ ಉಸಿರಾಟಕ್ಕೆ ತೊಂದರೆಯಾಗಿತ್ತು.

ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ABOUT THE AUTHOR

...view details