ನೆಲಮಂಗಲ: ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಬೋನಿಗೆ ಬೀಳಿಸಿದ್ದಾರೆ.
ಮಾಗಡಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - forest officers captured leopard
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ತಾಂಡೇನಪುರ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ.
ಕೊನೆಗೂ ಬೋನಿಗೆ ಬಿದ್ದ ಚಿರತೆ
ಮಾಗಡಿ ತಾಲೂಕಿನ ತಾಂಡೇನಪುರ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಇದಾಗಿತ್ತು. ಜಾನುವಾರುಗಳ ಮೇಲೆ ದಾಳಿ ನಡೆಸಿದ್ದರಿಂದ ಜನರು ಹೊಲ, ಗದ್ದೆಗಳಿಗೂ ತೆರಳುವುದಕ್ಕೂ ಹೆದರುತ್ತಿದ್ದರು.
ಸುಮಾರು ಮೂರೂವರೆ ವರ್ಷದ ಹೆಣ್ಣು ಚಿರತೆ ಇದಾಗಿದೆ. ಹಲವು ಬಾರಿ ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು ಎನ್ನಲಾಗಿದೆ.