ದೊಡ್ಡಬಳ್ಳಾಪುರ (ಬೆಂ.ಗ್ರಾ): ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪನವರು ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ. ಕೋಲಾರದ ದೇವರಾಜ್ ಅರಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
96 ವರ್ಷದ ಆರ್ ಎಲ್ ಜಾಲಪ್ಪ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.