ದೇವನಹಳ್ಳಿ: ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಕೆಐಎಎಲ್ನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಬಿಎಸ್ವೈ ಶಿಲಾನ್ಯಾಸ - Kempegowda statue
511ನೇ ಕೆಂಪೇಗೌಡ ಜಯಂತಿ ಪ್ರಯುಕ್ತ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯ ಶಿಲಾನ್ಯಾಸ ಕಾರ್ಯಕ್ರಮ ಕೆಐಎಎಲ್ನ ಸೆಂಟ್ರಲ್ ಪಾರ್ಕ್ನಲ್ಲಿ ನಡೆಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೂಮಿ ಪೂಜೆ ಹಾಗೂ ಮಾದರಿ ಪ್ರತಿಮೆಯ ಅನಾವರಣ ಮಾಡುವ ಮೂಲಕ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಅಶ್ವಥ್ ನಾರಾಯಣ್, ದೇವನಹಳ್ಳಿ ಶಾಸಕ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಅಶೋಕ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಗೋಪಾಲಯ್ಯ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬೈರತಿ ಬಸವರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.