ಕರ್ನಾಟಕ

karnataka

ETV Bharat / state

ಕೆಂಪೇಗೌಡ ವಿಮಾನ ನಿಲ್ದಾಣದ ನಾಲ್ವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ - ಕೆಂಪೇಗೌಡ ವಿಮಾನ ನಿಲ್ದಾಣದ ನಾಲ್ವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಾಲ್ವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

covid
covid

By

Published : Jan 13, 2022, 1:59 PM IST

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆರ್​ಟಿಪಿಸಿಆರ್ ಟೆಸ್ಟ್ ಮಾಡುವ ನಾಲ್ವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರನ್ನು ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಟೆಸ್ಟ್ ಮತ್ತು ಸ್ಕ್ರೀನಿಂಗ್ ಮಾಡಲು ಸರ್ಕಾರದಿಂದ ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಇವರಲ್ಲಿ ನಾಲ್ವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.

ಓದಿ:ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆ ಅರ್ಧಕ್ಕೆ​ ಮೊಟಕು

ವಿದೇಶದಿಂದ ಬಂದ ಇಬ್ಬರಿಗೆ ಕೊರೊನಾ ಪಾಸಿಟಿವ್:

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ ಕಜಕಸ್ತಾನ್ ಮೂಲದ 38 ವರ್ಷದ ವ್ಯಕ್ತಿಗೆ ಹಾಗೂ ನೈಜೀರಿಯಾ ಮೂಲದ 16 ವರ್ಷದ ಪ್ರಯಾಣಿಕನಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಓದಿ:ಬೆಳಗಾವಿ: ನಿಪ್ಪಾಣಿ ಖಾಸಗಿ ಪಿಯು ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೋವಿಡ್

ABOUT THE AUTHOR

...view details