ಬೆಂಗಳೂರು ಗ್ರಾಮಾಂತರ: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ರಾಜ್ಯದ ಪ್ರವರ್ಗ ಎ ದೇವಾಲಯಗಳಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಿದೆ.
ಏ.26ಕ್ಕೆ ಘಾಟಿ ಸುಬ್ರಹ್ಮಣ್ಯದಲ್ಲಿ ಉಚಿತ ಸಾಮೂಹಿಕ ವಿವಾಹ - ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ
ಏ. 26ರಂದು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಪ್ರವರ್ಗ ಎ ದೇವಾಲಯಗಳಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅಯೋಜಿಸಲಾಗಿದೆ. ಮುಖ್ಯವಾಗಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಶಿವಗಂಗೆಯ ಗಂಗಧಾರೇಶ್ವರ ಸ್ವಾಮಿ ಸನ್ನಿಧಿ ಹೊನ್ನದೇವಿ, ಶಿವಗಂಗೆ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರವರ್ಗ ಎ ದೇವಾಲಯಗಳಾದ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್.ಘಾಟಿಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ನೆಲಮಂಗಲ ತಾಲೂಕಿನ ಶ್ರೀ ಗಂಗಾಧರೇಶ್ವರಸ್ವಾಮಿ, ಹೊನ್ನದೇವಿ, ಶಿವಗಂಗೆ ದೇವಾಲಯಗಳಲ್ಲಿ ಏ.26 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ವಧು-ವರರು ಘಾಟಿ ಮತ್ತು ಶಿವಗಂಗೆಯ ದೇವಸ್ಥಾನದಲ್ಲಿ ನೋಂದಣಿ ಮಾಡಿಕೊಂಡು ಸಾಮೂಹಿಕ ವಿವಾಹದಲ್ಲಿ ಭಾಗವಹಿಸಬಹುದು. ವರನಿಗೆ ಹೂವಿನ ಹಾರ, ಪಂಚೆ - ಶಲ್ಯ ಖರೀದಿಗೆ 5 ಸಾವಿರ ನಗದು ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಖರೀದಿಗಾಗಿ 10 ಸಾವಿರ ನಗದು, ಸುಮಾರು 40 ಸಾವಿರ ವೆಚ್ಚದಲ್ಲಿ ಚಿನ್ನದ ತಾಳಿ, ಅಂದಾಜು 8 ಗ್ರಾಂ ತೂಕದ ಎರಡು ಚಿನ್ನದ ಗುಂಡುಗಳನ್ನು ನೀಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
TAGGED:
Free mass wedding