ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದದ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ದಾಖಲೆಯ ಪ್ರಮಾಣದ ಹಣ ಸಂಗ್ರಹವಾಗಿದೆ.
ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಹುಂಡಿ ಎಣಿಕೆ: 51ಲಕ್ಷಕ್ಕೂ ಅಧಿಕ ಹಣ ಸಂಗ್ರಹ - ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹುಂಡಿ ಎಣಿಕೆ
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ವೇಳೆ ಸುಮಾರು 51 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ.
ದೇವಸ್ಥಾನದ ಅವರಣದಲ್ಲಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಎನ್ ಕೃಷ್ಣಪ್ಪ , ಮುಜರಾಹಿ ತಹಶೀಲ್ದಾರ್ ನರಸಿಂಹಯ್ಯ ಮತ್ತು ಪೊಲೀಸರ ಸಮ್ಮುಖದಲ್ಲಿ ಈ ಎಣಿಕೆ ಕಾರ್ಯ ನಡೆದಿದ್ದು, ಭಕ್ತರ ಕಾಣಿಕೆ ರೂಪದಲ್ಲಿ 2 ಕೆಜಿ 200 ಗ್ರಾಂ ಬೆಳ್ಳಿ ಮತ್ತು ಬೆಳ್ಳಿ ಕಾಯಿನ್ ಸೇರಿದಂತೆ ಒಟ್ಟು 51,76,196 ಲಕ್ಷ ರೂಗಳಷ್ಟು ಹಣ ಸಂಗ್ರಹವಾಗಿದೆ.
ವಿಶೇಷವಾಗಿ ಅಮೇರಿಕದ ಡಾಲರ್, ಇಂಡೋನೇಷಿಯಾ ಮತ್ತು ಸಿಂಗಪುರ್ ನೋಟ್ಗಳು ಸಹ ಪತ್ತೆಯಾಗಿದ್ದು,ಜ.01ರಂದು ಕ್ಷೇತ್ರದಲ್ಲಿ ಸುಬ್ರಹ್ಮಣ್ಯಸ್ವಾಮಿಗೆ ರಥೋತ್ಸವ ನಡೆದ ಹಿನ್ನೆಲೆ ಒಂದೇ ದಿನದಲ್ಲಿ 50 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದರಿಂದ ದಾಖಲೆ ಪ್ರಮಾಣದಲ್ಲಿ ಹುಂಡಿ ಹಣ ಸಂಗ್ರಹವಾಗಿದೆ ಎನ್ನಲಾಗುತ್ತಿದೆ.