ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವಂತೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಕರ್ನಾಟಕ ಸರ್ಕಾರ ಹಿಂಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ನವೆಂಬರ್ 11 ರಂದು ಇಲ್ಲಿ ನಡೆಯಲಿರುವ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಈ ಮುನ್ನ ಸುತ್ತೋಲೆ ಹೊರಡಿಸಿತ್ತು.
ಬೆಂಗಳೂರು ಗ್ರಾಮಾಂತರದ ಎಲ್ಲ ಪಿಯು ಕಾಲೇಜುಗಳ ಪ್ರಾಂಶುಪಾಲರ ಜತೆ ನಡೆಸಿದ ಸಭೆಯಲ್ಲಿ ಕೈಗೊಂಡ ನಿರ್ಧಾರದ ಪ್ರಕಾರ, ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಶಿಕ್ಷಣ ಇಲಾಖೆ ಮಂಗಳವಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿತ್ತು.