ನೆಲಮಂಗಲ(ಬೆಂ.ಗ್ರಾಮಾಂತರ): ತಾಲೂಕಿನಲ್ಲಿ ಕೊರೊನಾ ಸೊಂಕಿತರ ಪ್ರಕರಣಗಳು 185ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ.
ಸಾಮಾಜಿಕ ಅಂತರ ಗಾಳಿಗೆ ತೂರಿ ಗ್ರಾಪಂ ಸದಸ್ಯನ ಹುಟ್ಟುಹಬ್ಬ ಆಚರಣೆ - ನೆಲಮಂಗಲ ಹುಟ್ಟುಹಬ್ಬ ಆಚರಣೆ ಸುದ್ದಿ
ನೆಲಮಂಗಲ ತಾಲೂಕಿನಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 185ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಈ ನಡುವೆ ಗ್ರಾಮ ಪಂಚಾಯತ್ ಸದಸ್ಯನೊಬ್ಬ ತನ್ನ ಹುಟ್ಟುಹಬ್ಬವನ್ನು ಬೆಂಬಲಿಗರೊಂದಿಗೆ ಆಚರಿಸಿ ಸಾರ್ವಜನಿಕವಾಗಿ ಟೀಕೆಗೆ ಒಳಗಾಗಿದ್ದಾರೆ.
ಇದರ ನಡುವೆ ಗ್ರಾಮ ಪಂಚಾಯತ್ ಸದಸ್ಯರ ಬೆಂಬಲಿಗರೊಂದಿಗೆ ಹುಟ್ಟುಹಬ್ಬದ ದರ್ಬಾರ್ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ನಿಯಮ ಮೀರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ವಾಜರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆಂಪರಾಜು, ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಆಚರಣೆಯಲ್ಲಿ ಯಾರೂ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಸಹ ಧರಿಸದೇ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಲಾಕ್‌ಡೌನ್ ನಿಯಮ ಮರೆತು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.