ನೆಲಮಂಗಲ: ನಾವೆಲ್ಲ ವಿಧಾನಸೌಧ, ವಿಕಾಸ ಸೌಧ, ಈ ರೀತಿಯ ಹೆಸರು ಕೇಳಿರೋದು ಕಾಮನ್, ಆದರೆ, ಇಲ್ಲೊಂದು ಗ್ರಾಮಪಂಚಾಯಿತಿ ಗ್ರಾಮ ಸೌಧವನ್ನು ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಿಸಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಮಾದರಿ ಗ್ರಾಮ ಪಂಚಾಯಿತಿ ಕಟ್ಟಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗುವಂತೆ ಮಾಡಿದೆ.
ಒಂದೆಡೆ ಮದುಮಗಳಂತೆ ಸಿಂಗಾರಗೊಂಡಿರುವ ಗ್ರಾಮ ಪಂಚಾಯಿತಿಯ ಗ್ರಾಮಸೌಧ ಕಟ್ಟಡ, ಕೇಂದ್ರ ಸರ್ಕಾರ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಕಟ್ಟಡ, ಬರೀ ಅಡಂಬರವಾಗದೇ ನೆರೆ ಸಂತ್ರಸ್ತರಿಗೂ ಒಂದು ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಗ್ರಾಮ ಪಂಚಾಯಿತಿ ಆಗಿದೆ. ಹೌದು, ಇದು ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ವೈಭವವಿದು. ಗ್ರಾಮ ಪಂಚಾಯಿತಿಯ ಎಲ್ಲ ಸೇವೆಗಳು ಫಲಾನುಭವಿಗಳಿಗೆ ತಲುಪಲು ಗ್ರಾಮ ಪಂಚಾಯಿತಿ ಕಟ್ಟಡ ಸಹ ಸುಸಜ್ಜಿತವಾಗಿರಬೇಕು, ಈ ನಿಟ್ಟಿನಲ್ಲಿ ಬೂದಿಹಾಳ್ ಗ್ರಾಮಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಒಂದು ಹೆಜ್ಜೆ ಮುಂದೆ ಹೋಗಿದ್ದು, ಪಂಚಾಯಿತಿ ವ್ಯಾಪ್ತಿಯ ವಿವಿಧ ಖಾಸಗಿ ಕಂಪನಿಗಳ ಸಿಎಸ್ಆರ್ ಹಣದ ಮೂಲದಿಂದ 1 ಕೋಟಿ 70 ಲಕ್ಷ ವೆಚ್ಚದಲ್ಲಿ ನೂತನ ಸುಸರ್ಜಿತ ಕಟ್ಟಡವನ್ನು ನಿರ್ಮಿಸಿ ಲೋಕರ್ಪಾಣೆಗೊಳಿಸಿದರು.