ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಒಂದೆಡೆ ಪ್ರವಾಹ ಮತ್ತೊಂದೆಡೆ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ ಮತ್ತು ಕೇಂದ್ರದ ಧೋರಣೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿವೆ.
ರೈತ ಸಂಘ ಮತ್ತ ಹಸಿರು ಸೇನೆಯಿಂದ ಅ. 10ರಂದು ವಿಧಾನಸೌಧ ಮುತ್ತಿಗೆ ಎಚ್ಚರಿಕೆ - ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಒಂದೆಡೆ ಪ್ರವಾಹ, ಮತ್ತೊಂದೆಡೆ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರ ಮತ್ತು ಕೇಂದ್ರದ ಧೋರಣೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿವೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆಯನ್ನ ಸರ್ಕಾರಕ್ಕೆ ನೀಡಿವೆ. ರಾಜ್ಯದಲ್ಲಿ ನೆರೆ ಬಂದು 4,394 ಗ್ರಾಮಗಳು ಮುಳುಗಡೆಯಾಗಿವೆ. 14,81,473 ಎಕರೆಯಲ್ಲಿ ಬೆಳೆದ ಬೆಳೆಗಳು ನೆರೆಗೆ ತುತ್ತಾಗಿವೆ. ಪ್ರವಾಹದಿಂದ ಭೂಮಿಯ ಮೇಲ್ಪದರ ಕೊಚ್ಚಿ ಹೋಗಿದ್ದು, ಮೊದಲಿನಂತೆ ಭೂಮಿ ಹಸನಾಗಲು ಎರಡು-ಮೂರು ವರ್ಷಗಳೇ ಬೇಕು. ಮತ್ತೆ ಕೆಲವು ಕಡೆ ಬರಗಾಲ ಮುಂದುವರೆದಿದೆ. ಇಂತಹ ಸಮಯದಲ್ಲೇ ಬ್ಯಾಂಕ್ ಮತ್ತು ಫೈನಾನ್ಸ್ ಕಂಪನಿಗಳು ಚೆಕ್ ಬೌನ್ಸ್ ವಿಚಾರವಾಗಿ ರೈತರ ಮೇಲೆ ಕೇಸ್ ಹಾಕುತ್ತಿವೆ. ಈ ಸಮಯದಲ್ಲಿ ರೈತರ ನೆರವಿಗೆ ಬರಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತೋರಿಸುತ್ತಿವೆ. ಇದರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಕ್ಟೋಬರ್ 10ರಂದು ವಿಧಾನಸೌಧ ಮುತ್ತಿಗೆ ಹಾಕಲಿವೆ. ಅಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೂ ರೈತರು ಮೆರವಣಿಗೆಯಲ್ಲಿ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ರೈತರ ನೆರವಿಗೆ ಬರುವಂತೆ ಒತ್ತಾಯ ಮಾಡುವುದಾಗಿ ರೈತ ಮುಖಂಡೆ ಸುಲೋಚನಾ ತಿಳಿಸಿದರು.