ಕರ್ನಾಟಕ

karnataka

ETV Bharat / state

ರಾಮನಗರ ಜಿಲ್ಲೆಗೂ ವಿನಾಯಿತಿ ನೀಡುವಂತೆ ಹೆಚ್​ಡಿಕೆ ಒತ್ತಾಯ - ಹೆಚ್.ಡಿ. ಕುಮಾರಸ್ವಾಮಿ ಟ್ವಿಟ್​

ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರೆಸಿದರೂ 9 ಜಿಲ್ಲೆಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

kumaraswamy
ಹೆಚ್.ಡಿ. ಕುಮಾರಸ್ವಾಮಿ

By

Published : Apr 30, 2020, 5:41 PM IST

ಬೆಂಗಳೂರು:ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು. ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರೆಸಿದರೂ 9 ಜಿಲ್ಲೆಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ವೈರಸ್ ಮುಕ್ತವಾಗಿರುವ ಜಿಲ್ಲೆಗಳಲ್ಲಿ ನೀಡಿರುವ ವಿನಾಯಿತಿಯನ್ನು ತಕ್ಷಣವೇ ರಾಮನಗರ ಜಿಲ್ಲೆಗೂ ಅನ್ವಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಯವರಿಗೆ ಒತ್ತಾಯಿಸಿದ್ದಾರೆ.

ABOUT THE AUTHOR

...view details