ಕರ್ನಾಟಕ

karnataka

ETV Bharat / state

ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ - ಆರೋಗ್ಯದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಡಿಸಿ ರವೀಂದ್ರ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ಸೂಚಿಸಿದರು.

ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

By

Published : Nov 15, 2019, 12:16 PM IST

ಬೆಂ.ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,‌ ತಂಬಾಕು ಸೇವನೆಯಿಂದಾಗಿ ಕ್ಯಾನ್ಸರ್​ನಂತಹ ಮಾರಾಣಾಂತಿಕ ರೋಗಗಳು ಬರುತ್ತವೆ ಎಂದು ತಿಳಿಸಿದರು. ಇದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶಿಬಿರಗಳನ್ನು ಏರ್ಪಡಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

2003ರ ಕೋಟ್ಪಾ ಕಾಯಿದೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೆಕ್ಷನ್ 4 ಮತ್ತು 6 ಬಿ ಅನ್ವಯ, ಶಾಲೆಯ ಮುಖ್ಯ ಪ್ರವೇಶ ದ್ವಾರಗಳಲ್ಲಿ ತಂಬಾಕು ಮುಕ್ತ ಶಾಲೆ ಮತ್ತು ತಂಬಾಕು ಸೇವನೆ ನಿಷೇಧ ಎಂದು ಸೂಚಿಸುವ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು. ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಶಾಲಾ ಕಾಲೇಜು ಆವರಣಗಳು ಮತ್ತು ಸರ್ಕಾರಿ ಕಚೇರಿ ಆವರಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಉಲ್ಲಂಘನೆ ಮಾಡುವವರಿಗೆ ರೂ. 200 ರವರೆಗೆ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಏರ್ಪಡಿಸಿ, ಕ್ಷಯ ಕಾಯಿಲೆಯ ಗುಣ ಲಕ್ಷಣಗಳು ಕಂಡು ಬಂದಲ್ಲಿ ಉಚಿತವಾಗಿ ಚಿಕಿತ್ಸೆ ಕೊಟ್ಟು ಶೀಘ್ರವಾಗಿ ಗುಣಪಡಿಸಲು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗೆ ತಿಳಿಸಿದರು. ರಾಷ್ಟ್ರೀಯ ಗುಣಾತ್ಮಕ ಸೇವೆಯಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ, 'ಸ್ವಚ್ಛ ಸ್ವಾಸ್ಥ್ಯ ಮತ್ತು ಸರ್ವತ್ರಃ ಕಾರ್ಯ' ಎಂಬ ಪಾಕ್ಷಿಕ ಸ್ವಚ್ಛತಾ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು. ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

For All Latest Updates

ABOUT THE AUTHOR

...view details