ದೇವನಹಳ್ಳಿ: ಬ್ರಿಟನ್ನಲ್ಲಿ ಕೊರೊನಾ ವೈರಸ್ನ ಎರಡನೇ ಅಲೆ ಪ್ರಾರಂಭವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಂಪೇಗೌಡ ವಿಮಾಣ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಇಂದು ಆರೋಗ್ಯಾಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಆರೋಗ್ಯ ಇಲಾಖೆಯ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿ ಪ್ರಭುದೇವ ಗೌಡ ಸೇರಿದಂತೆ ಅಧಿಕಾರಿಗಳ ತಂಡ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಅಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿತು.
ಈ ವೇಳೆ ಮಾತನಾಡಿದ ನೋಡಲ್ ಅಧಿಕಾರಿ ಪ್ರಭುದೇವ ಗೌಡ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸೂಚನೆಯಂತೆ ಯುಕೆಯಿಂದ ಬರುವ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ವರದಿಯಲ್ಲಿ ಪ್ರಯಾಣಿಕರಿಗೆ ಪಾಸಿಟಿವ್ ಬಂದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಐಸೋಲೇಶನ್ ಮಾಡಲಾಗುವುದು. ವರದಿಯಲ್ಲಿ ನೆಗೆಟಿವ್ ಬಂದಲ್ಲಿ 14 ದಿನಗಳ ಕಾಲ ಹೋಮ್ ಐಸೋಲೇಶನ್ ಮಾಡಲಾಗುವುದು ಎಂದು ತಿಳಿಸಿದರು.