ಬೆಂಗಳೂರು:ನೆಲಮಂಗಲ ಪುರಸಭೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು,ಪುರಸಭೆ ಬದಲಿಗೆ ನಗರಸಭೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ನೆಲಮಂಗಲ ಪುರಸಭೆ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ದಿನಾಂಕ ಪ್ರಕಟ
ನೆಲಮಂಗಲ ಪುರಸಭೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು,ಪುರಸಭೆ ಬದಲಿಗೆ ನಗರಸಭೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯ ಅಧಿಕಾರಾವಧಿಯು ಮುಕ್ತಾಯವಾಗಿರುವುದರಿಂದ ತೆರವಾಗಿರುವ ಎಲ್ಲಾ ವಾರ್ಡ್‍ಗಳ ಕೌನ್ಸಿಲರ್ ಗಳ ಸ್ಥಾನಗಳಿಗೆ ಜೂನ್ 01 ರಂದು ಚುನಾವಣೆ ನಡೆಯಲಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎಸ್.ಕರೀಗೌಡ ಅವರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.ನೆಲಮಂಗಲ ಪುರಸಭೆಯ ಚುನಾವಣೆಗೆ ಮೇ 21 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ಮೇ 22 ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆಯಲು ಮೇ 24 ಕೊನೆಯ ದಿನವಾಗಿದೆ. ಜೂನ್ 01 ರಂದು ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮರು ಮತದಾನ ಅವಶ್ಯವಿದ್ದಲ್ಲಿ ಜೂನ್ 02 ರಂದು ಬೆಳಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ.
ಇನ್ನು ಚುನಾವಣಾ ನೀತಿ ಸಂಹಿತೆ ಮೇ 13 ರಿಂದ ಜಾರಿಗೆ ಬಂದಿದ್ದು, ನೆಲಮಂಗಲ ಪುರಸಭೆಯ ವ್ಯಾಪ್ತಿಯಲ್ಲಿ ಮಾತ್ರ ಜೂನ್ 03 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎಸ್.ಕರೀಗೌಡ ತಿಳಿಸಿದ್ದಾರೆ.