ದೊಡ್ಡಬಳ್ಳಾಪುರ:ಕೃಷಿ ಭೂಮಿಯನ್ನು ಮಲ್ಟಿ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೃಷಿಯೋಗ್ಯ ಭೂಮಿಯನ್ನು ಕೈಗಾರಿಕೆಗೆ ಕೊಡಲು ಒಪ್ಪದ ರೈತರು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಮಲ್ಟಿ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆ ವಿರೋಧಿಸಿ ರೈತರಿಂದ ಹೆದ್ದಾರಿ ತಡೆ - Large Bellavangala Hobali of the Valiyapallapur Taluk
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಮಲ್ಟಿ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಹುಲಿಕುಂಟೆ ಗ್ರಾಮದ ಬೇಟೆ ರಂಗನಾಥ ದೇವಾಲಯದಿಂದ ಮೆರವಣಿಗೆ ನಡೆಸಿದ ರೈತರು ಬಸ್ ನಿಲ್ದಾಣ ಬಳಿ ರಸ್ತೆ ತಡೆದು ಕೈಗಾರಿಕಾ ಪ್ರದೇಶಕ್ಕೆ ವಿರೋಧ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಭಾಗಿಯಾಗಿ ಮಾತನಾಡಿ, ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಶಾಸನದಂತೆ ಯಾವುದೇ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕಾದರೆ ಆ ಭಾಗದ ಶೇ. 80ರಷ್ಟು ರೈತರ ಒಪ್ಪಿಗೆ ಪಡೆದು ಕೈಗಾರಿಕೆ ಸ್ಥಾಪನೆ ಮಾಡಬೇಕು. ಆದರೆ ಈಗಿನ ಸರ್ಕಾರ, ರೈತರು, ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಕನಿಷ್ಠ ಮಾಹಿತಿ ನೀಡದೆಯೇ ಕೈಗಾರಿಕೆ ಸ್ಥಾಪನೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.
ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಕೆಐಎಡಿಬಿ ಭೂ ಸ್ವಾಧೀನ ಅಧಿಕಾರಿ ಅನಿಲ್ ಕುಮಾರ್ ಮಾತನಾಡಿ, ಕೂಡಲೇ ನಮ್ಮ ಕೈಗಾರಿಕಾ ಇಲಾಖೆಯ ಮುಖ್ಯ ಆಯುಕ್ತರ ಜೊತೆ ರೈತ ಮುಖಂಡರು, ಶಾಸಕರು, ಸಂಸದರ ಸಭೆ ಆಯೋಜಿಸಿ ಉದ್ದೇಶಿತ ಯೋಜನೆಯ ಸಾಧಕ ಭಾದಕ ಚರ್ಚೆಗಳನ್ನು ಮಾಡಲಾಗುವುದು ಎಂದರು.