ಆನೇಕಲ್: ಲಾಕ್ಡೌನ್ ನಿಯಮಗಳನ್ನು ಮುರಿದು ಬೆಂಗಳೂರು ಹೊರವಲಯದ ಅತ್ತಿಬೆಲೆ ಬಳಿಯ ಆರ್‌ಟಿಒ ಕಚೇರಿಯಲ್ಲಿ ಇನ್ಸ್ಪೆಕ್ಟರ್ ಶ್ರೀನಿವಾಸಪ್ಪ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಹೋಮ ಹವನ ನೆರವೇರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಲಾಕ್ಡೌನ್ ನಿಯಮ ಮುರಿದು ಸರ್ಕಾರಿ ಕಚೇರಿಯಲ್ಲಿ ಅದ್ಧೂರಿ ಹೋಮ ಹವನ ಆರೋಪ - ಹೊಸಕೋಟೆ
ಬೆಂಗಳೂರು ಗ್ರಾಮಾಂತ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಆರ್‌ಟಿಒ ಕಚೇರಿಯಲ್ಲಿ ಕೊರೊನಾ ಪ್ರೇರಿತ ಲಾಕ್ಡೌನ್ನ ನಿರ್ಬಂಧಗಳನ್ನು ಗಾಳಿಗೆ ತೂರಿ ಹೋಮ ಹವನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಕಾನೂನಿ ಅನ್ವಯ, ಸರ್ಕಾರಿ ಕಚೇರಿಗಳಲ್ಲಿ ಹೋಮ ಹವನ ಮಾಡುವಂತಿಲ್ಲ. ಪ್ರಸ್ತುತ, ಲಾಕ್ಡೌನ್ ಜಾರಿಯಲ್ಲಿ ಇರುವುದರಿಂದ ಮದುವೆ ಸೇರಿದಂತೆ ಜನ ಸೇರುವ ಯಾವುದೇ ಧಾರ್ಮಿಕ ಕಾರ್ಯಕ್ರಮ ಕೈಗೊಳ್ಳಬೇಕಾದರೂ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆಯಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳವುದರ ಜೊತೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಆದರೆ, ಸರ್ಕಾರದ ಲಾಕ್ಡೌನ್ ನಿರ್ಬಂಧಗಳನ್ನು ಗಾಳಿಗೆ ತೂರಿ ಆರ್‌ಟಿಒ ಕಚೇರಿಯಲ್ಲಿ ಹೋಮ ಹವನ ನಡೆಸಲಾಗಿದೆ ಎಂಬ ಆರೋಪವಿದೆ. ಜನ ಸಾಮಾನ್ಯರು ನಿಯಮ ಉಲ್ಲಂಘಿಸಿದರೇ ಪ್ರಕರಣ ದಾಖಲಿಸಿಕೊಂಡು ಶಿಕ್ಷೆ ನೀಡಲಾಗುತ್ತದೆ. ಅಧಿಕಾರಿಗಳೇ ಕಾನೂನು ಉಲ್ಲಂಘಿಸಿದರೆ ಯಾವ ಶಿಕ್ಷೆ ನೀಡಬೇಕು ಎಂಬುದು ಸಾರ್ವಜನಿಕರ ಪ್ರಶ್ನೆ.