ನೆಲಮಂಗಲ :ಶಾರ್ಟ್ ಸರ್ಕ್ಯೂಟ್ನಿಂದ ಹೋಮ್ ಅಪ್ಲೈಯನ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ನಿಡವಂದ ಗ್ರಾಮದ ಸಿದ್ದಾರ್ಥ ಎಂಟರ್ ಪ್ರೈಸಸ್ನ ಕುಕ್ಕರ್ ಮತ್ತು ಹೋಮ್ ಅಪ್ಲೈಯನ್ಸ್ ತಯಾರಿಕಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಂಡ ತಕ್ಷಣವೇ ಕಾರ್ಮಿಕರು ಫ್ಯಾಕ್ಟರಿಯಿಂದ ಹೊರಗೆ ಬಂದಿದ್ದಾರೆ.
ಫ್ಯಾಕ್ಟರಿಯಲ್ಲಿ 300ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದು, ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಂದ ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ.