ದೊಡ್ಡಬಳ್ಳಾಪುರ:ಮಧ್ಯಾಹ್ನ ಮನೆ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 4 ಲಕ್ಷ ನಗದು, 5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.
ಹಾಡಹಗಲೇ ಮನೆಗೆ ನುಗ್ಗಿದ ಖದೀಮರು... 4 ಲಕ್ಷ ನಗದು, 5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ - ಕಳ್ಳತನ ಪ್ರಕರಣ
ಮನೆ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣ, ಹಣ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.
ತಿರುಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮದ ರಾಜಣ್ಣ ಎಂಬುವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯ ಪುರುಷರು ಕೆಲಸ ನಿಮಿತ್ತ ಹೊರ ಹೋಗಿದ್ದು, ಮಹಿಳೆಯರು ಬಟ್ಟೆ ತೊಳೆಯಲು ತೋಟಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದದನ್ನ ಗಮನಿಸಿದ ಕಳ್ಳರಿಬ್ಬರು ಮನೆಯ ಬೀಗ ಒಡೆದು ಒಳ ನುಗ್ಗಿದ್ದಾರೆ. ಒಬ್ಬ ಮನೆಯ ಹೊರಗೆ ನಿಂತು ಜನರ ಬಗ್ಗೆ ನಿಗಾ ವಹಿಸಿದ್ದಾನೆ. ಮತ್ತೊಬ್ಬ ಕಳ್ಳ ಮನೆಯ ಬಾಗಿಲು ಹಾಕಿ ಬೀರು ಒಡೆದು 4 ಲಕ್ಷ ನಗದು 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಮನೆಯ ಹೊರಗಡೆ ಆಡುತ್ತಿದ್ದ ಮಗಳು ನೀರು ಕುಡಿಯಲು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.