ನೆಲಮಂಗಲ :ಹುಲ್ಲಿನ ಬಣವೆಗೆ ಬಿದ್ದ ಬೆಂಕಿ ಮನೆಗೂ ಆವರಿಸಿ ಮನೆ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹುಲ್ಲಿನ ಬಣವೆಗೆ ಬಿದ್ದ ಬೆಂಕಿಯಿಂದ ಹೊತ್ತಿ ಉರಿದ ಮನೆ - ನೆಲಮಂಗಲದಲ್ಲಿ ಬೆಂಕಿಗಾಹುತಿಯಾದ ಮನೆ
ಬೆಟ್ಟಯ್ಯ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯ ಪಕ್ಕದಲ್ಲಿದ್ದ ಹುಲ್ಲಿನ ಬಣವೆಗೆ ಬಿದ್ದ ಬೆಂಕಿ ನಂತರ ಮನೆಗೆ ವ್ಯಾಪಿಸಿದೆ. ಬೆಂಕಿ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ..
ಬೆಂಕಿಗಾಹುತಿಯಾದ ಮನೆ
ಬೆಟ್ಟಯ್ಯ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯ ಪಕ್ಕದಲ್ಲಿದ್ದ ಹುಲ್ಲಿನ ಬಣವೆಗೆ ಬಿದ್ದ ಬೆಂಕಿ ನಂತರ ಮನೆಗೆ ವ್ಯಾಪಿಸಿದೆ. ಬೆಂಕಿ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.