ಬೆಂಗಳೂರು : ಸದ್ಯದಲ್ಲಿಯೇ ಸಂಪುಟ ವಿಸ್ತರಣೆಯಾಗಲಿದ್ದು, ಸಚಿವ ಸ್ಥಾನ ತ್ಯಾಗ ಮಾಡಲು ತಾವು ಸಿದ್ಧ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ: ಸಚಿವ ಪುಟ್ಟರಾಜು - ದೇವೇಗೌಡ
ಸದ್ಯದಲ್ಲಿಯೇ ಸಂಪುಟ ವಿಸ್ತರಣೆಯಾಗಲಿದ್ದು, ಸಚಿವ ಸ್ಥಾನ ತ್ಯಾಗ ಮಾಡಲು ತಾವು ಸಿದ್ಧ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿ.ಎಸ್.ಪುಟ್ಟರಾಜು ಪದ್ಮನಾಭನಗರದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದೇನೆ. ನಾನು ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದರು.
ಬಿಜೆಪಿ ನಾಯಕರಿಂದ ಮೈತ್ರಿ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮೊದಲಿನಿಂದಲೂ ನಡೆಯುತ್ತಲೇ ಇದೆ. ಆದರೆ ಅವರ ಪ್ರಯತ್ನ ಸಫಲವಾಗುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳ ನಾಯಕು ಸರ್ಕಾರವನ್ನು ಉಳಿಸಲು ಅಗತ್ಯವಿರುವ ತಂತ್ರ ರೂಪಿಸಿದ್ದಾರೆ ಎಂದರು.