ಕರ್ನಾಟಕ

karnataka

ETV Bharat / state

ಅಪಘಾತ ಸ್ಥಳಗಳನ್ನ ಗುರುತಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ - Identify accident sites and take precautionary measures

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಉಳಿದ ಆಂತರಿಕ ರಸ್ತೆಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತ ಸಂಭವಿಸುತ್ತಿರುವ ಸ್ಥಳಗಳಲ್ಲಿ ಅಪಘಾತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ

By

Published : Sep 4, 2020, 1:25 AM IST

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತವಾಗುವ ಸ್ಥಳಗಳನ್ನು ಗುರುತಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಉಳಿದ ಆಂತರಿಕ ರಸ್ತೆಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತ ಸಂಭವಿಸುತ್ತಿರುವ ಸ್ಥಳಗಳಲ್ಲಿ ಅಪಘಾತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ತಿಳಿಸಿದರು. ಟೋಲ್‌ಗಳಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳು ಚಲಿಸಲು ಪ್ರತ್ಯೇಕ ಲೈನ್ ಕಲ್ಪಿಸುವಂತೆ ತಿಳಿಸಿದರಲ್ಲದೆ, ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಿ ಎಂದರು.

ನೆಲಮಂಗಲ ವಿಭಾಗದ ಸಾರಿಗೆ ಅಧಿಕಾರಿ ಮಾತನಾಡಿ, ನೆಲಮಂಗಲ ವ್ಯಾಪ್ತಿಯಲ್ಲಿ 14 ಬ್ಲ್ಯಾಕ್ ಸ್ಪಾಟ್ (ಹೆಚ್ಚು ಅಪಘಾತವಾಗುವ ಸ್ಥಳ)ಗಳನ್ನು ಗುರುತಿಸಲಾಗಿದೆ. ನೆಲಮಂಗಲ ವ್ಯಾಪ್ತಿಯಲ್ಲಿ ಈ ವರ್ಷ 78 ಅಪಘಾತ ಪ್ರಕರಣಗಳು ಸಂಭವಿಸಿವೆ. 271 ಮಂದಿ ಗಾಯಗೊಂಡಿದ್ದು, 89 ಮಂದಿ ಮೃತರಾಗಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ABOUT THE AUTHOR

...view details