ದೇವನಹಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಗಾಂಜಾ ಮಾರಾಟ: ಇಬ್ಬರ ಬಂಧನ
ದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
marijuana
ಮುನಿರಾಜು ಹಾಗೂ ನಾಗೇಶ್ ಎಂಬುವರನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ 3.5 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಹೊರವಲಯದ ಏರ್ಲೈನ್ಸ್ ಡಾಬಾ ಬಳಿ ಗಾಂಜಾ ಸಾಗಣಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ಬಿಯಾಗಿದ್ದಾರೆ.
ಬಂಧಿತರು ಹೊಸಕೋಟೆ ಕಡೆಯಿಂದ ಗಾಂಜಾ ತಂದಿರೋದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಗಾಂಜಾ ಮಾರಾಟದ ಬಹುದೊಡ್ಡ ಜಾಲದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ದೇವನಹಳ್ಳಿ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.