ದೇವನಹಳ್ಳಿ:ಜಿಲ್ಲೆಯಲ್ಲಿ ಅನಧಿಕೃತ, ಕಾನೂನು ಬಾಹಿರ, ಅವೈಜ್ಞಾನಿಕ ಗಣಿಗಾರಿಕೆ ಮತ್ತು ಕಲ್ಲು ಪುಡಿ ಮಾಡುವ ಕೆಲಸ ನಡೆಯದಂತೆ ಎಚ್ಚರಿಕೆ ವಹಿಸುವಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ (ಗಣಿ) ಸಮಿತಿ ಮತ್ತು ಜಿಲ್ಲಾ ಕಲ್ಲುಪುಡಿ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲ್ಲುಪುಡಿ ಮಾಡುವವರು ಸರ್ಕಾರದಿಂದ ಲೈಸೆನ್ಸ್ ಪಡೆದು, ಪರಿಣಿತಿ ಹೊಂದಿರುವ ಜೊತೆಗೆ ತಂತ್ರಜ್ಞಾನದ ಬಗ್ಗೆ ಅರಿವಿರಬೇಕು. ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಕ್ವಾರಿ ಮತ್ತು ಬ್ಲಾಸ್ಟಿಂಗ್ ಚಟುವಟಿಕೆಗಳು ಸಂಪೂರ್ಣವಾಗಿ ನಿಲ್ಲಬೇಕು, ಈ ಸಂಬಂಧ ತಾಲ್ಲೂಕು ಮಟ್ಟದಲ್ಲಿ ಒಂದು ಸಮಿತಿ ರಚಿಸಿ, ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು ಎಂದರು.