ಕರ್ನಾಟಕ

karnataka

ETV Bharat / state

ಶಾಲಾ ಕಾಲೇಜುಗಳಲ್ಲಿ ತಿಂಗಳ ಒಳಗೆ ಮಳೆನೀರು ಕೊಯ್ಲು ಅಳವಡಿಕೆ: ಜಿಲ್ಲಾಧಿಕಾರಿ ಸೂಚನೆ - ಜಿಲ್ಲಾಧಿಕಾರಿ ಕರೀಗೌಡ

ಬೆಂಗಳೂರು ಗ್ರಾಮಾಂತರದಲ್ಲಿ ಶಾಲಾ ಕಾಲೇಜುಗಳು ಸೇರಿದಂತೆ ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ, ಮಳೆ ನೀರು ಕೊಯ್ಲು ಪದ್ದತಿ ಕಡ್ಡಾಯವಾಗಿ ಅಳವಡಿಸಬೇಕೆಂದು, ಜಿಲ್ಲಾಧಿಕಾರಿ ಆದೇಶಿದ್ದಾರೆ.

ಜಿಲ್ಲಾಧಿಕಾರಿ ಸೂಚನೆ

By

Published : Aug 13, 2019, 8:03 PM IST

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸೆಪ್ಟೆಂಬರ್ 16 ರೊಳಗೆ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಸಂಬಂಧಿಸಿದ ಪ್ರಾಂಶುಪಾಲರುಗಳಿಗೆ ಜಿಲ್ಲಾಧಿಕಾರಿ ಕರೀಗೌಡ ಸೂಚಿಸಿದ್ದಾರೆ.

ಜಲಶಕ್ತಿ ಅಭಿಯಾನದಡಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲಾ ಶಾಲಾ ಕಾಲೇಜಿನ ಶಿಕ್ಷಕರು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಹಾಗೂ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಮಳೆ ನೀರು ಕೊಯ್ಲಿನ ಅಳವಡಿಕೆ ಒಂದು ತಿಂಗಳ ಒಳಗೆ ಆಗಬೇಕು. ಮುಂದಿನ ಸೆಪ್ಟೆಂಬರ್ ತಿಂಗಳ ಎರಡನೇ ವಾರದೊಳಗೆ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಂಡಿರುವ ಕುರಿತು ವರದಿ ಸಲ್ಲಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಮಳೆನೀರು ಕೊಯ್ಲು ಅಳವಡಿಕೆಗೆ ಜಿಲ್ಲಾಧಿಕಾರಿ ಕರೀಗೌಡ ಸೂಚನೆ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಮನೆಗಳಲ್ಲಿ ಒಂದು ತಿಂಗಳೊಳಗಾಗಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಂಡು ಮಾಹಿತಿ ನೀಡಬೇಕು. ಹಾಗೇ ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಅಂಚೆ ಕಚೇರಿಗಳು, ಶಾಲಾ ಕಾಲೇಜುಗಳು, ಬ್ಯಾಂಕ್ ಶಾಖೆಗಳು, ಪಶುಪಾಲನಾ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು, ಪೊಲೀಸ್ ಠಾಣೆಗಳು, ಕೈಗಾರಿಕೆಗಳು, ಕಲ್ಯಾಣ ಮಂಟಪಗಳು, ಕಾರ್ಖಾನೆಗಳು, ವಾಣಿಜ್ಯ ಕಟ್ಟಡಗಳು, ಬಾರ್ ಅಂಡ್ ರೆಸ್ಟೊರೆಂಟ್‍ಗಳು, ಗೋಡೌನ್‍ಗಳು, ಫೌಲ್ಟ್ರಿ ಫಾರಂಗಳು, ವೇರ್ ಹೌಸ್‍ಗಳು, ಸಹಕಾರಿ ಸಂಘಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆಗೆ ಸದ್ಯಕ್ಕೆ ಯಾವುದೇ ಸಬ್ಸಿಡಿ ಇರುವುದಿಲ್ಲ. ಅದರೇ ದೊಡ್ಡಬಳ್ಳಾಪುರ ನಗರಸಭೆಯಿಂದ 5,000 ರೂ.ಗಳನ್ನು ನೀಡಲಾಗುವುದು ಎಂದರು. ಪ್ರತಿ ಶಾಲಾ-ಕಾಲೇಜಿನಿಂದ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳೆಲ್ಲರೂ ಸೇರಿ ಆಗಸ್ಟ್ 15 ರಂದು ಒಟ್ಟು 6,000 ಗಿಡಗಳನ್ನು ನೆಡುವಂತೆ ಸೂಚಿಸಿದರು. ಗಿಡ ನೆಡುವ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಸಿಗಳನ್ನು ಅರಣ್ಯ ಇಲಾಖೆಯ ತಾಲ್ಲೂಕು ಕಚೇರಿಗಳಿಂದ ಪೂರೈಸಲಾಗುವುದು ಎಂದರು.

ABOUT THE AUTHOR

...view details