ದೊಡ್ಡಬಳ್ಳಾಪುರ (ಬೆಂ.ಗ್ರಾ): ಮೊಬೈಲ್ ಆ್ಯಪ್ ಮೂಲಕ ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿಗಳು ಮತ್ತು ಬೆಟ್ಟಿಂಗ್ನಲ್ಲಿ ಹಣ ಹಾಕಿದ ಜೂಜುಕೋರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಮೊಬೈಲ್ ಆ್ಯಪ್ ಮೂಲಕ ಐಪಿಎಲ್ ಬೆಟ್ಟಿಂಗ್: ಬುಕ್ಕಿಗಳ ಬಂಧನ
ಅರಳುಮಲ್ಲಿಗೆ ಸರ್ಕಲ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ.
ಇಲ್ಲಿನ ಅರಳುಮಲ್ಲಿಗೆ ಸರ್ಕಲ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ದಾಳಿ ನಡೆಸಿದಾಗ, ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿಗಳನ್ನು ಬಂಧಿಸಿದ್ದಾರೆ.
ಬುಕ್ಕಿಗಳಾದ ಮಂಜುನಾಥ್ ಮೌರ್ಯ, ಶಿವು, ಪುನೀತ್, ಆಚಾರಿ ಮಂಜ, ಜೂಜಾಡಲು ಬಂದಿದ್ದ ರಾಮಾಂಜಿ, ಮಂಜುನಾಥ್, ಸುಂದರೇಶ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೆಲ ಬುಕ್ಕಿಗಳು ಪರಾರಿಯಾಗಿದ್ದಾರೆ. ಬಂಧಿತರಿಂದ 3,150 ರೂಪಾಯಿ ನಗದು ಮತ್ತು 5 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.