ಕರ್ನಾಟಕ

karnataka

ETV Bharat / state

ಜಿಮ್ ಟ್ರೈನರ್ ಬರ್ಬರ ಕೊಲೆ : ಹುಡುಗಿ ವಿಚಾರಕ್ಕೆ ನಡೆಯಿತಾ ಈ ಕೃತ್ಯ? - ಹುಡುಗಿ ವಿಚಾರಕ್ಕೆ ಜಿಮ್ ಟ್ರೈನರ್ ಬರ್ಬರ ಕೊಲೆ

ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೈನರ್ ಕೊಲೆಯಾಗಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಈಗಾಗಲೇ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಈ ಕುರಿತು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಜಿಮ್ ಟ್ರೈನರ್ ಬರ್ಬರ ಕೊಲೆ
ಜಿಮ್ ಟ್ರೈನರ್ ಬರ್ಬರ ಕೊಲೆ

By

Published : Aug 27, 2021, 3:23 PM IST

ದೇವನಹಳ್ಳಿ: ತಾಲೂಕಿನ ವಿಜಯಪುರ ಪಟ್ಟಣದ ಹೊರಭಾಗದ ಬೆಂಡಿಗಾನಹಳ್ಳಿ ರಸ್ತೆಯಲ್ಲಿ ಜಿಮ್ ಟ್ರೈನರ್​​ನೊಬ್ಬನನ್ನ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಜಿಮ್ ಟ್ರೈನರ್ ಆಗಿದ್ದ ಶಿವಕುಮಾರ್ (28) ಎಂಬಾತ ಕೊಲೆಯಾದ ಯುವಕ.

ಹುಡುಗಿ ವಿಚಾರಕ್ಕೆ ಕೊಲೆಯಾಗಿರುವ ಸಂಶಯ ವ್ಯಕ್ತವಾಗಿದೆ. ಮೃತ ಯುವಕ ದೇವನಹಳ್ಳಿ ತಾಲೂಕಿನ ಬೈರಾಪುರ ನಿವಾಸಿಯಾಗಿದ್ದು, ವಿಜಯಪುರ ಜಿಮ್​​ನಲ್ಲಿ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ. ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಶವವನ್ನು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೈನರ್ ಕೊಲೆಯಾಗಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಈಗಾಗಲೇ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಈ ಕುರಿತು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೈಸೂರು ಬಳಿಕ ಬೆಳಗಾವಿಯಲ್ಲೂ ಹೇಯ ಕೃತ್ಯ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್..!

ABOUT THE AUTHOR

...view details