ದೊಡ್ಡಬಳ್ಳಾಪುರ:ಕೋವಿಡ್ ನಿಯಮ ಉಲ್ಲಂಘಿಸಿ ದೊಡ್ಡಬಳ್ಳಾಪುರ ನಗರದಲ್ಲಿ ಅದ್ಧೂರಿ ಕರಗ ಮಹೋತ್ಸವ ನಡೆದಿದ್ದು, ಕರಗ ಮಹೋತ್ಸವದಲ್ಲಿ ಸಾಮಾಜಿಕ ಅಂತರ ಮರೆತು ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.
ಕೋವಿಡ್ ನಿಯಮ ಗಾಳಿಗೆ ತೂರಿ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಕರಗ ಆಚರಣೆ! - ಸಾಮಾಜಿಕ ಅಂತರ ಮರೆತು ಅದ್ಧೂರಿ ಕರಗ ಆಚರಣೆ
ಬುದ್ಧ ಪೌರ್ಣಿಮೆ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಸಪ್ತಮಾತೃಕೆ ಕರು ಮಾರಿಯಮ್ಮ ದೇವಸ್ಥಾನದಲ್ಲಿ ಕರಗ ಮಹೋತ್ಸವ ನಡೆದಿದ್ದು, ಕರಗ ಮಹೋತ್ಸವದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.
ಬುದ್ಧ ಪೌರ್ಣಿಮೆ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಸಪ್ತಮಾತೃಕೆ ಕರು ಮಾರಿಯಮ್ಮ ದೇವಸ್ಥಾನದಲ್ಲಿ ಕರಗ ಮಹೋತ್ಸವ ನಡೆದಿದ್ದು, ಕರಗ ಮಹೋತ್ಸವದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ದೇವಸ್ಥಾನದ ಅವರಣದಲ್ಲಿ ಕರಗ ಮಹೋತ್ಸವಕ್ಕೆ ಸಂಬಂಧಿಸಿದ ಆಚರಣೆ ನಡೆದಿದ್ದು, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸದೆ ಜನರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಇದರ ನಡುವೆ ಕೊರೊನಾ ಭಯವನ್ನು ಮರೆತು ಧಾರ್ಮಿಕ ಕಾರ್ಯಗಳಲ್ಲಿ ಜನರು ಭಾಗಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಸಾರ್ವಜನಿಕ ಪ್ರವೇಶ ಮತ್ತು ಪೂಜೆ ಪುನಸ್ಕಾರ ನಿಷೇಧಿಸಲಾಗಿದೆ. ಆದರೆ ಕೋವಿಡ್ ನಿಯಮ ಉಲ್ಲಂಘಿಸಿ ದೇವನಹಳ್ಳಿ ತಾಲೂಕಿನ ಬೇಸ್ತರ ಪೇಟೆಯ ಗಂಗಮ್ಮ ದೇವಸ್ಥಾನದಲ್ಲಿ ಮಹಿಳೆಯರು ದೇವಸ್ಥಾನದ ಮುಂದೆ ಆರತಿ ಹಚ್ಚಿದ್ದರು. ಇದಕ್ಕೆ ಸಂಬಂಧಿಸಿದಂತೆ ಆರ್ಚಕ ಸೇರಿದಂತೆ 20ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಘಟನೆ ನಡೆದ ಕೆಲವೇ ದಿನದಲ್ಲಿ ದೊಡ್ಡಬಳ್ಳಾಪುರ ನಗರದಲ್ಲಿ ಅದ್ದೂರಿ ಕರಗ ಮಹೋತ್ಸವ ನಡೆದಿದೆ.