ಹೊಸಕೋಟೆ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ ಮಾಡುವ ಮೂಲಕ ಒಕ್ಕಲಿಗರ ಶಕ್ತಿ ಪ್ರದರ್ಶನ ನಡೆಯಿತು. ಇಷ್ಟು ದಿನ ತಾಲೂಕಿನಲ್ಲಿ ಎರಡು ಒಕ್ಕಲಿಗ ಸಮುದಾಯದ ಸಂಘಗಳಿದ್ದವು. ಇದೀಗ ಚುನಾವಣೆ ಸಮೀಪ ಆಗುತ್ತಿದ್ದಂತೆ ಹೊಸಕೋಟೆ ಕ್ಷೇತ್ರದಲ್ಲಿ ಎರಡು ಸಂಘಗಳು ಒಟ್ಟಾಗಿ ಒಗ್ಗಟ್ಟು ಪ್ರದರ್ಶನ ಮಾಡಿವೆ.
5 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಸೇರಿದ ಒಕ್ಕಲಿಗ ಸಮಾಜದವರು ಇಂದು ಕೆಂಪೇಗೌಡರ ಜಯಂತಿ ಹೆಸರಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಕೆ.ಆರ್.ಸರ್ಕಲ್ನಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆ ಮಾಡಿದರು.
ಇದೇ 27 ರಂದು ಹೊಸಕೋಟೆಯಲ್ಲಿ ಸಚಿವ ಎಂಟಿಬಿ ಹೊಸಕೋಟೆ ನಗರದಲ್ಲಿ ಒಕ್ಕಲಿಗ ಸಮುದಾಯದ ಸಚಿವರಾದ ಕಂದಾಯ ಸಚಿವ ಆರ್.ಅಶೋಕ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕರೆಸಿ ಜಯಂತಿ ಆಚರಣೆ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಶಾಸಕ ಶರತ್ ಬಚ್ಚೇಗೌಡ ನೇತೃತ್ವದಲ್ಲಿ ಜಯಂತಿ ಆಚರಣೆ ಮಾಡುವ ಮೂಲಕ ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ ಅನ್ನೋದನ್ನು ಪ್ರದರ್ಶನ ಮಾಡಿದ್ದಾರೆ.