ಕರ್ನಾಟಕ

karnataka

ETV Bharat / state

ಸಚಿವ ಸ್ಥಾನಕ್ಕಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಟೆಂಪಲ್ ರನ್ - ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದು, ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಕೆ.ಎಸ್ ಈಶ್ವರಪ್ಪ ಪ್ರಬಲ ಖಾತೆಯ ಆಕಾಂಕ್ಷಿಯಾಗಿದ್ದಾರೆ..

eshwarappa
eshwarappa

By

Published : Aug 3, 2021, 7:54 PM IST

ದೊಡ್ಡಬಳ್ಳಾಪುರ (ಬೆಂ.ಗ್ರಾ) :ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇದೀಗ ಅವರು ಟೆಂಪಲ್ ರನ್ ಮಾಡುತ್ತಿದ್ದು, ಸಚಿವ ಸ್ಥಾನಕ್ಕಾಗಿ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದರು.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪತ್ನಿ ಸಮೇತರಾಗಿ ಬಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದು, ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಕೆ.ಎಸ್ ಈಶ್ವರಪ್ಪ ಪ್ರಬಲ ಖಾತೆಯ ಆಕಾಂಕ್ಷಿಯಾಗಿದ್ದಾರೆ.

ಕೆ.ಎಸ್ ಈಶ್ವರಪ್ಪ ಟೆಂಪಲ್ ರನ್

ಮಾಜಿ ಸಚಿವರಾದ ಈಶ್ವರಪ್ಪಗೆ ಖಾತೆ ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಆದರೆ, ಕೊನೆಯ ಕ್ಷಣದಲ್ಲಿ ಯಾವುದೇ ರೀತಿಯ ಬದಲಾವಣೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಸಚಿವ ಸ್ಥಾನಕ್ಕಾಗಿ ಕೆ ಎಸ್ ಈಶ್ವರಪ್ಪ ಘಾಟಿ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮಪತ್ನಿ ಸಮೇತರಾಗಿ ದೇವರ ದರ್ಶನ ಪಡೆದರು.

ABOUT THE AUTHOR

...view details