ಹೊಸಕೋಟೆ(ಬೆಂಗಳೂರು ಗ್ರಾಮಾಂತರ): ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿ ಹೊಡೆದಿರುವ ಘಟನೆ ಜಿಲ್ಲೆಯ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಬಳಿ ಸಂಭವಿಸಿದೆ.
ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಬಂದು ಸರ್ವಿಸ್ ರಸ್ತೆಯಲ್ಲಿ ಹಳ್ಳಕ್ಕೆ ಬಿದ್ದಿದೆ. ಚಾಲಕನ ಅಜಾಗರೂಕತೆಯಿಂದ ಬಸ್ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ.