ನೆಲಮಂಗಲ: ರಸ್ತೆಗೆ ಅಡ್ಡವಾಗಿ ಬಂದ ಬೈಕ್ ಸವಾರರನ್ನು ಬಚಾವ್ ಮಾಡಲು ಹೋಗಿ ಕೆಎಸ್ಆರ್ಟಿಸಿ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ನೆಲಮಂಗಲ ತಾಲೂಕಿನ ಕಲ್ಗಟ್ಟ ಗ್ರಾಮದ ಬಳಿ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೋಟದಿಂದ ಮೇವು ತೆಗೆದುಕೊಂಡು ಬರುತ್ತಿದ್ದ ಬೈಕ್ ಹಠಾತ್ ರಸ್ತೆಗೆ ಅಡ್ಡವಾಗಿ ಬಂದಿದೆ. ಬೈಕ್ ಸವಾರನ ಪ್ರಾಣ ಉಳಿಸಲು ಚಾಲಕ ಯತ್ನಿಸಿದ್ದು, ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಬೆಂಗಳೂರಿನ ಶಾಲಾ ಕಾಲೇಜ್ಗಳಿಗೆ ಹೊರಟಿದ್ದ ವಿದ್ಯಾರ್ಥಿಗಳಿದ್ದರು.