ಕರ್ನಾಟಕ

karnataka

ETV Bharat / state

ಹೆಂಡತಿ ಜೊತೆ ವಿಡಿಯೋ ಕಾಲ್​​ನಲ್ಲಿ ಮಾತನಾಡುತ್ತಲೇ ರೈಲಿಗೆ ತಲೆ ಕೊಟ್ಟ ಕೆಎಸ್ಆರ್​​ಟಿಸಿ ಚಾಲಕ - ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಕೆಎಸ್​​​ಆರ್​ಟಿಸಿ ನೌಕರ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತು ಕೆಎಸ್​​​ಆರ್​ಟಿಸಿ ಚಾಲಕನೊಬ್ಬ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

KSRTC employee suicide
ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಕೆಎಸ್​​​ಆರ್​ಟಿಸಿ ನೌಕರ ಆತ್ಮಹತ್ಯೆ

By

Published : Jul 2, 2020, 7:34 PM IST

Updated : Jul 3, 2020, 11:37 AM IST

ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ಹೆಂಡತಿ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡುತ್ತಿರುವಾಗಲೇ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಕೆಎಸ್​​​ಆರ್​ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಮೇಲ್ಸೇತುವೆ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಅಮರೇಶ್ ಹಿರೇಮಠ (40) ಎಂದು ಗುರುತಿಸಲಾಗಿದೆ.

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಕೆಎಸ್​​​ಆರ್​ಟಿಸಿ ನೌಕರ ಆತ್ಮಹತ್ಯೆ

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ನಿವಾಸಿಯಾಗಿದ್ದು, ಕೆಎಸ್​​​ಆರ್​ಟಿಸಿ ಸಂಸ್ಥೆಯ ದೊಡ್ಡಬಳ್ಳಾಪುರ ಘಟಕದಲ್ಲಿ ಚಾಲಕ ಕಮ್ ನಿರ್ವಾಹಕರಾಗಿ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಗರದ ರೋಜಿಪುರದಲ್ಲಿ ಇವರ ಕುಟುಂಬ ವಾಸವಾಗಿತ್ತು.

ಗಂಡ-ಹೆಂಡತಿ ನಡುವೆ ಜಗಳವಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ತಿಂಡಿ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ನಂತರ ರೈಲ್ವೆ ಟ್ರ್ಯಾಕ್ ಬಳಿಗೆ ಬಂದ ಆತ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ತಾನು ಸಾಯುತ್ತಿರುವುದ್ದಾಗಿ ಹೇಳುತ್ತಲೇ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 3, 2020, 11:37 AM IST

ABOUT THE AUTHOR

...view details