ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕ್ಯಾಬ್ ಚಾಲಕ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕ್ಯಾಬ್ ಚಾಲಕ ಪ್ರತಾಪ್ ಆತ್ಮಹತ್ಯೆ ಏರ್ಪೋರ್ಟ್ ದ್ವಾರದಲ್ಲಿ ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡಿದ್ದ ಚಾಲಕ
ನಿನ್ನೆ ಸಂಜೆ 4:30 ಸಮಯದಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಪಿಕ್ ಅಪ್ ಪಾಯಿಂಟ್ನಲ್ಲಿ ಟ್ಯಾಕ್ಸಿಯೊಳಗೆ ಪೆಟ್ರೋಲ್ ಸುರಿದುಕೊಂಡುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ ಪ್ರತಾಪ್, ಇಂದು ಮುಂಜಾನೆ ಚಿಕಿತ್ಸೆಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದ!
ರಾಮನಗರ ಮೂಲದ ಪ್ರತಾಪ್ ಏರ್ ಪೋರ್ಟ್ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು, ಖಾಸಗಿ ಟಾಕ್ಸಿ ಸಂಸ್ಥೆಗಳು ಪ್ರಯಾಣಿಕರಿಗೆ ಪ್ರತಿ ಕಿ.ಮೀಗೆ 10ರ ದರದಲ್ಲಿ ಸೇವೆಯನ್ನು ನೀಡುತ್ತಿದ್ದವು. ಇದರಿಂದ ಟ್ಯಾಕ್ಸಿ ಚಾಲಕರಿಗೆ ಬಾಡಿಗೆ ಸಿಗುತ್ತಿರಲಿಲ್ಲ, ಮೃತ ಪ್ರತಾಪ್ ಸಹ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು. ಇದರಿಂದ ಮನನೊಂದಿದ್ದ ಪ್ರತಾಪ್ ನಿನ್ನೆ ಸಂಜೆ 4:30 ಸಮಯದಲ್ಲಿ ಏರ್ ಪೋರ್ಟ್ ಮುಂಭಾಗದಲ್ಲಿ ಪೆಟ್ರೋಲ್ ಸುರಿದು ಕೊಂಡುಕೊಂಡು ಆತ್ಮಹತ್ಯೆ ಯತ್ನಿಸಿದರು. ಭದ್ರತಾ ಸಿಬ್ಬಂದಿ ಕಾರಿನ ಗಾಜು ಒಡೆದು ಪ್ರತಾಪ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶೇ. 90 ರಷ್ಟು ಸುಟ್ಟಿದ ಪ್ರತಾಪ್ ಇಂದು ಮುಂಜಾನೆ 5:30 ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ಕ್ಯಾಬ್ ಚಾಲಕ ಪ್ರತಾಪ್ ಸಾವು ಕ್ಯಾಬ್ ಚಾಲಕರಿಂದ ಪ್ರತಿಭಟನೆಗೆ ನಿರ್ಧಾರ
ಪ್ರತಾಪ್ ಸಾವು ಟ್ಯಾಕ್ಸಿ ಚಾಲಕರ ಆಕ್ರೋಶಕ್ಕೆ ಕಾರಣವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶವವನ್ನಿಟ್ಟು ಪ್ರತಿಭಟನೆಗೆ ಮುಂದಾಗಿದ್ದಾರೆ. ಏಕರೂಪ ದರವನ್ನು ಸರ್ಕಾರ ನಿಗದಿ ಮಾಡಬೇಕು, ಕಡಿಮೆ ದರದಲ್ಲಿ ಸೇವೆ ನೀಡುತ್ತಿರುವ ಖಾಸಗಿ ಕ್ಯಾಬ್ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕೆನ್ನುವುದು ಟ್ಯಾಕ್ಸಿ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಏರ್ಪೋರ್ಟ್ ಮುಂಭಾಗ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಟ್ಯಾಕ್ಸಿ ಚಾಲಕ