ದೊಡ್ಡಬಳ್ಳಾಪುರ :ಲಾಕ್‌ಡೌನ್ ಜಾರಿಯಾದಾಗಿನಿಂದಲೂ ಪಾಲಿಹೌಸ್‌ಗಳಲ್ಲಿ ಬೆಳೆಯಲಾಗಿದ್ದ ಹೂವು ಮಾರಾಟವಾಗದೇ ಪುಷ್ಪ ಕೃಷಿಕರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬೆಸ್ಕಾಂ ಮೇ 18ರೊಳಗೆ ವಿದ್ಯುತ್ ಬಿಲ್ ಪಾವತಿಗೆ ಗಡುವು ನೀಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಕ್ಷಾಂತರ ರೂ. ಸಾಲ ಪಡೆದು ಪಾಲಿಹೌಸ್‌ಗಳಲ್ಲಿ ಹೂವು ಬೆಳೆದು ದೇಶಿ ಮಾರುಕಟ್ಟೆ ಸೇರಿದಂತೆ ವಿದೇಶಕ್ಕೆ ರಫ್ತು ಮಾಡುತ್ತಿದ್ದರು. ಆದರೆ, ಲಾಕ್ಡೌನ್ನಿಂದ ವಿಮಾನಯಾನ ರದ್ದಾಗಿದರಿಂದ ರಫ್ತು ನಿಂತಿದೆ. ದೇಶದಲ್ಲಿ ದೇವಸ್ಥಾನಗಳ ಬಾಗಿಲು ಬಂದ್ ಆಗಿವೆ. ಮದುವೆ ಕಾರ್ಯಗಳು ಸೇರಿದಂತೆ ಶುಭ ಸಮಾರಂಭಗಳು ನಡೆಯುತ್ತಿಲ್ಲ, ಇದರಿಂದ ಹೂವುಗಳನ್ನು ಕೇಳುವವರೇ ಇಲ್ಲದಂತಾಗಿ ಲಕ್ಷಾಂತರ ರೂಪಾಯಿ ನಷ್ಟಕ್ಕೆ ತುತ್ತಾಗಿದ್ದಾರೆ.