ಬೆಂಗಳೂರು:ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಸರ್ಕಾರ ತುರ್ತಾಗಿ 50 ಕೋಟಿ ರೂಪಾಯಿ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿ ಬೆಂಗಳೂರು ವಕೀಲರ ಸಂಘ(ಎಎಬಿ) ಇಂದು ನಡೆಸಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.
ಏಷ್ಯಾದಲ್ಲಿಯೇ ಅತಿ ದೊಡ್ಡ ವಕೀಲರ ಸಂಘವಾಗಿರುವ ಬೆಂಗಳೂರು ವಕೀಲರ ಸಂಘ ಗುರುವಾರ ನಗರದ ವಕೀಲರ ಭವನದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಿದೆ. ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಬಳಿಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಸ್ಥಿತಿಗತಿಗಳ ಕುರಿತು ಚರ್ಚಿಸಿ ಕೆಲ ನಿರ್ಣಯಗಳನ್ನು ಕೈಗೊಂಡಿದೆ.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು :
- ವಕೀಲರಿಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದರೂ ನೆರವು ನೀಡದ ಸರ್ಕಾರದ ಧೋರಣೆ ಖಂಡಿಸುವುದು ಮತ್ತು 50 ಕೋಟಿ ರೂಪಾಯಿ ನೆರವನ್ನು ತುರ್ತಾಗಿ ನೀಡುವಂತೆ ಒತ್ತಾಯಿಸುವುದು.