ಕರ್ನಾಟಕ

karnataka

By

Published : Nov 12, 2022, 9:19 PM IST

ETV Bharat / state

ಕೊಯಿರಾ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೊಯಿರಾ ಬೆಟ್ಟದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ.

leopard-sighted-in-koira-hill-devanahalli
ಕೊಯಿರಾ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದೇವನಹಳ್ಳಿ : ತಾಲೂಕಿನ ಕೊಯಿರಾ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಬೆಟ್ಟದ ಆಸುಪಾಸಿನಲ್ಲಿರುವ ನಿವಾಸಿಗಳಿಗೆ ಆತಂಕ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಚಿರತೆಯನ್ನು ಸೆರೆ ಹಿಡಿಯುವುದರಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಚಿರತೆ ಬೆಟ್ಟದಲ್ಲಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಇತ್ತೀಚೆಗಷ್ಟೇ ಈ ಚಿರತೆಯು ಎರಡು ಕುರಿಗಳು ಮೇಲೆ ದಾಳಿ ನಡೆಸಿತ್ತು ಎನ್ನಲಾಗಿದೆ. ಇನ್ನು ಬೆಟ್ಟದ ಮೇಲೆ ಭೀಮೇಶ್ವರ ಸ್ವಾಮಿ ದೇಗುಲ ಇರುವುದರಿಂದ ಭಕ್ತರು ಬೆಟ್ಟಕ್ಕೆ ಬಂದು ಹೋಗುತ್ತಿರುತ್ತಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಬೆಟ್ಟದಲ್ಲಿರುವ ಚಿರತೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ರಾಜಾರೋಷವಾಗಿ ಬೀದಿಯಲ್ಲೇ ನಡೆದುಕೊಂಡ ಹೋದ ಮೊಸಳೆ!

ABOUT THE AUTHOR

...view details