ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ರೈತರು ಹಾಗೂ ಬಳಕೆದಾರರ ಅಗತ್ಯ ಪೂರೈಸುವ ಕಾರ್ಯ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸರ್ಕಾರ ಮಧ್ಯಪ್ರವೇಶಿಸಿ ರೈತರು, ಬಳಕೆದಾರರ ಅಗತ್ಯ ಪೂರೈಸಲಿ: ಸಿದ್ದರಾಮಯ್ಯ - Siddaramaiah tweet
ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರೈತರು ಹಾಗೂ ಬಳಕೆದಾರರ ಅಗತ್ಯತೆಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದ್ದಾರೆ.
ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಅವರು, ಲಾಕ್‌ಡೌನ್‌ನಿಂದಾಗಿ ತರಕಾರಿ, ಹಣ್ಣು, ಹೂ ಮಾರಾಟಕ್ಕೆ ಅವಕಾಶ ಇಲ್ಲದೆ ಇವುಗಳನ್ನು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಈ ಉತ್ಪನ್ನಗಳ ಅಲಭ್ಯತೆಯಿಂದಾಗಿ ಬಳಕೆದಾರರು ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ಉತ್ಪನ್ನಗಳನ್ನು ಖರೀದಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಲಿ. ಕುರಿಗಳಿಂದ ಕೊರೊನಾ ಸೋಂಕು ತಗುಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು ಕಾಯುವ ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡ್ತಿದ್ದಾರೆ.
ಇನ್ನು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದ್ದಾರೆ.
TAGGED:
Siddaramaiah tweet