ನೆಲಮಂಗಲ:ಹೆಂಡತಿ ಮತ್ತು ಮಗುವನ್ನ ಬೈಕ್ನಲ್ಲಿ ಕರೆದುಕೊಂಡು ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಮೇಲೆ ಲಾರಿ ಹರಿದು ಸವಾರ ಸಾವು ಬೆಂಗಳೂರು ಉತ್ತರ ತಾಲೂಕಿನ ಕಾಚೋಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಉತ್ತರ ಪ್ರದೇಶ ಮೂಲದ ಬೈಕ್ ಸವಾರ ಮುಸ್ತಾಕ್ ( 36) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಕಾಚೋಹಳ್ಳಿ ನಿವಾಸಿಯಾಗಿದ್ದು, ಅದೇ ಗ್ರಾಮದ ಐಹೆಚ್ ಎಂಟರ್ ಪ್ರೈಸಸ್ನಲ್ಲಿ ಕೆಲಸ ಮಾಡುತ್ತಿದ್ದ. ಮುಸ್ತಾಕ್ ತನ್ನ ಹೆಂಡತಿ ಮತ್ತು ಮಗು ಜೊತೆ ಬೈಕ್ನಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಮುಸ್ತಾಕ್ನ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಮುಸ್ತಾಕ್ ಸಾವನ್ನಪ್ಪಿದ್ದಾನೆ. ಪತ್ನಿ ಹಾಗೂ ಮಗು ಫುಟ್ಪಾತ್ ಮೇಲೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಕುರಿತಂತೆ ಮಾದನಾಯಕಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.