ಕರ್ನಾಟಕ

karnataka

ETV Bharat / state

ಮಹದಾಯಿ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ: ಸಚಿವ ಆರ್​.ಅಶೋಕ್​​

ಮಹದಾಯಿ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುತ್ತೇವೆ. ಎರಡು ರಾಜ್ಯಗಳಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅದು ಸಾಧ್ಯವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಕಂದಾಯ ಸಚಿವ ಆರ್.ಅಶೋಕ್

By

Published : Oct 20, 2019, 8:28 AM IST

Updated : Oct 20, 2019, 3:05 PM IST

ಬೆಂಗಳೂರು: ಎರಡೂ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಮಹದಾಯಿ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದರು.

ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್​ವೈ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ನೆಲ, ಜಲ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಬೆಂಡಾಗುವುದಿಲ್ಲ. ಎರಡೂ ರಾಜ್ಯದ ಅಧಿಕಾರಿಗಳೊಂದಿಗೆ ಮಾತನಾಡಿ, ರಾಜಕೀಯವಾಗಿ ನಾವು ಕೆಲವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಚುನಾವಣೆಯಲ್ಲಿ ಇವೆಲ್ಲ ಕಾಮನ್: ಚುನಾವಣೆ ಸಮಯದಲ್ಲಿ ಈ ರೀತಿಯ ಹೇಳಿಕೆ ನೀಡುವುದು ಕಾಮನ್​. ಅದೇ ರೀತಿ ಸಿದ್ದರಾಮಯ್ಯನವರು ಒಂದು ಕಡೆ ನೀರು ಬಿಡುವುದಾಗಿ, ಇನ್ನೊಂದು ಕಡೆ ಬಿಡಲು ಆಗಲ್ಲ ಎಂದು ಹೇಳಿದ್ದಾರೆ. ಅವುಗಳನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

Last Updated : Oct 20, 2019, 3:05 PM IST

ABOUT THE AUTHOR

...view details