ಆನೇಕಲ್: ಕೊಲೆಯತ್ನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ಪಟ್ಟಣದ ತಿಗಳರ ಬೀದಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಆನೇಕಲ್ ಪಟ್ಟಣದ ನಿವಾಸಿ ಮಂಜು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಮೃತ ಮಂಜು ಕಳೆದ ಕೆಲ ತಿಂಗಳ ಹಿಂದೆ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯ ಪತಿಯ ಕೊಲೆಗೆ ಯತ್ನಿಸಿದ್ದರು. ಆದರೆ ಅಂದು ಬಿಜೆಪಿ ಮುಖಂಡ ಮಂಜು ಕೈಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದರು. ಈ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.