ದೊಡ್ಡಬಳ್ಳಾಪುರ: ಕೊರೊನಾ ಮೂರನೇ ಅಲೆಯ ಭೀತಿಯಿಂದಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 13 ಮತ್ತು ಸೆಪ್ಟೆಂಬರ್ 13ರಂದು ನಿಗದಿಯಾಗಿದ್ದ ಸಪ್ತಪದಿ ಸಾಮೂಹಿಕ ವಿವಾಹ ಮಹೋತ್ಸವವನ್ನು ಜಿಲ್ಲಾಡಳಿತ ಮುಂದೂಡಿದೆ.
ಬಡವರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಅದರಂತೆ ಘಾಟಿ ಸುಬ್ರಹ್ಮಣ್ಯದಲ್ಲಿ ಇದೇ ತಿಂಗಳ 13 ಮತ್ತು ಸೆಪ್ಟೆಂಬರ್ 13ರಂದು ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಿಗದಿ ಮಾಡಲಾಗಿತ್ತು. ಮದುವೆಗಾಗಿ 66 ಅರ್ಜಿಗಳು ಬಂದಿದ್ದವು. ಈ ಪೈಕಿ 27 ಜೋಡಿಗಳ ಅರ್ಜಿಗಳು ಮಾತ್ರ ವಿವಾಹಕ್ಕೆ ಅರ್ಹವಾಗಿದ್ದು, ಆಗಸ್ಟ್ 6ರಂದು ಜೋಡಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು.