ದೊಡ್ಡಬಳ್ಳಾಪುರ: ಸರ್ಕಾರದ ವತಿಯಿಂದ ನಡೆಯುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನ ಘಾಟಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 13 ಮತ್ತು ಸೆಪ್ಟೆಂಬರ್ 13ರಂದು ನಡೆಸಲಾಗುತ್ತಿದೆ. ಹಿನ್ನೆಲೆಯಲ್ಲಿ ಅರ್ಹ ವಧು-ವರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಬಡವರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ. ವಧು-ವರರ ಹೆಸರು ನೋಂದಾಯಿಸಿಕೊಳ್ಳಲು ಆಗಸ್ಟ್ 1 ಕೊನೆಯ ದಿನವಾಗಿದೆ.
ನವ ವಧು-ವರರಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ವರನಿಗೆ ₹5 ಸಾವಿರ ವಧುವಿಗೆ ₹10 ಸಾವಿರ, ವಧುಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಸೇರಿ ಒಟ್ಟು ₹55 ಸಾವಿರ ಖರ್ಚು ಮಾಡಲಾಗುತ್ತದೆ.
ಈಗಾಗಲೇ ಶ್ರೀಕ್ಷೇತ್ರದಲ್ಲಿ ಎರಡು ಬಾರಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದಿದೆ. ಕೋವಿಡ್ ಹಿನ್ನೆಲೆ ಕಾರ್ಯಕ್ರಮ ಮುಂದೂಡಲಾಗಿತ್ತು. ಲಾಕ್‌ಡೌನ್ ತೆರವಾದ ನಂತರ ಮತ್ತೆ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗುತ್ತಿದೆ.
ಇದನ್ನೂ ಓದಿ : ದರ್ಶನ್ ಪ್ರಕರಣ: ಗಂಗಾಧರ್ ಹೇಳಿಕೆಯನ್ನ ಪಿನ್ ಟೂ ಪಿನ್ ದಾಖಲಿಸುತ್ತಿರುವ ಪೊಲೀಸರು!