ದೊಡ್ಡಬಳ್ಳಾಪುರ: ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಹೋಮ್ ಐಸೋಲೇಷನ್‌ಗೆ ಒಳಗಾಗಿದ್ದಾರೆ.
ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯಗೆ ಕೊರೊನಾ - MLA Venkataramanaya tested corona positive
ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ದೊಡ್ಡಬಳ್ಳಾಪುರ ಶಾಸಕ ಟಿ. ವೆಂಕಟರಮಣಯ್ಯ
ಶಾಸಕರಿಗೆ ಸೋಂಕಿನ ಲಕ್ಷಣಗಳು ಕಂಡು ಬಂದ ಕಾರಣ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಸೋಂಕು ಬಾಧಿಸಿರುವುದು ಖಾತ್ರಿಯಾಗಿದೆ.
'ನನ್ನ ಆರೋಗ್ಯ ಸ್ಥಿರವಾಗಿದ್ದು ಕ್ಷೇತ್ರದ ಜನರಿಗೆ ಆತಂಕ ಬೇಡ. ಹೋಮ್ ಐಸೋಲೇಷನ್‌ಗೆ ಒಳಗಾಗಿ ಅಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ. 15 ದಿನಗಳವರೆಗೂ ಯಾರೂ ನನ್ನನ್ನು ಭೇಟಿ ಮಾಡಬೇಡಿ. ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಮನವಿ ಮಾಡಿದ್ದಾರೆ.