ದೇವನಹಳ್ಳಿ:ತಮ್ಮ ಮನೆಯ ಮೇಲೆ ಇಡಿ ಅಧಿಕಾರಿಗಳ ದಾಳಿ ನಂತರ ಮೊದಲ ಬಾರಿಗೆ ದೆಹಲಿಗೆ ತೆರಳಿದ್ದ ಶಾಸಕ ಜಮೀರ್ ಅಹಮದ್ ಖಾನ್ ಇಂದು ಕೆಐಎಎಲ್ಗೆ ಮರಳಿದ್ದು, ವೈಯಕ್ತಿಕ ವಿಚಾರಕ್ಕೆ ದೆಹಲಿಗೆ ಹೋಗಿದ್ದಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ನಂತರ ಜಮೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇಂದು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಮೀರ್ ಅಹಮದ್ ಆಗಮಿಸಿದ್ದಾರೆ.