ಕರ್ನಾಟಕ

karnataka

ETV Bharat / state

ದಲಿತ ಯುವಕನ ಹತ್ಯೆಗೆ ಖಂಡನೆ: ಆರೋಪಿಗಳ ಗಡಿಪಾರಿಗೆ ಒತ್ತಾಯ - ಡಾ.ಬಿ .ಆರ್ ಅಂಬೇಡ್ಕರ್ ಗ್ರಂಥಾಲಯ

ವಿಜಯಪುರದ ಸಿಂದಗಿ ತಾಲೂಕಿನಲ್ಲಿ ದಲಿತ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ದಲಿತ ಯುವಕನ ಹತ್ಯೆಗೆ ಖಂಡನೆ
ದಲಿತ ಯುವಕನ ಹತ್ಯೆಗೆ ಖಂಡನೆ

By

Published : Sep 2, 2020, 1:16 PM IST

ಆನೇಕಲ್:ವಿಜಯಪುರದ ಸಿಂದಗಿ ತಾಲೂಕಿನಲ್ಲಿ ದಲಿತ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಆನೇಕಲ್ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಗ್ರಂಥಾಲಯದ ಮುಂಭಾಗದಲ್ಲಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಜಾತಿ ವಿಷ ಬೀಜ ಬಿತ್ತುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದವು.

ದಲಿತ ಯುವಕನ ಹತ್ಯೆಗೆ ಖಂಡನೆ

ಈ ಘಟನೆ ಬಗ್ಗೆ ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ. ಚುನಾವಣೆಯಲ್ಲಿ ಇವರಿಗೆ ಮತ ನೀಡಬಾರದು ಎಂದು ಆಕ್ರೋಶ ಹೊರ ಹಾಕಿದರು.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಮಹಾನಾಯಕ ಧಾರಾವಾಹಿ ವೇಳೆ ಬೆಸ್ಕಾಂ ಉದ್ದೇಶಪೂರ್ವಕವಾಗಿ ವಿದ್ಯುತ್​ ಕಡಿತಗೊಳಿಸುತ್ತದೆ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details