ಹೊಸಕೋಟೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ ರದ್ದತಿಗೆ ಆಗ್ರಹಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪೌರತ್ವ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ರದ್ದತಿಗೆ ಮುಸ್ಲಿಂ ಸಂಘಟನೆಗಳ ಆಗ್ರಹ - ಮುಸ್ಲಿಂ ಸಂಘಟನೆಗಳ ಆಗ್ರಹ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ ರದ್ದತಿಗೆ ಮುಸ್ಲಿಂ ಸಂಘಟನೆಗಳು ಆಗ್ರಹಿಸಿ ಪ್ರತಿಭಟನೆ ನಡೆಸಿದವು.
![ಪೌರತ್ವ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ರದ್ದತಿಗೆ ಮುಸ್ಲಿಂ ಸಂಘಟನೆಗಳ ಆಗ್ರಹ ಸಿಎಎ ಎನ್‌ಆರ್‌ಸಿ ರದ್ದತಿಗೆ ಮುಸ್ಲಿಂ ಸಂಘಟನೆಗಳ ಆಗ್ರಹ](https://etvbharatimages.akamaized.net/etvbharat/prod-images/768-512-5544992-thumbnail-3x2-gh.jpg)
Muslim community people protest
ಸಿಎಎ, ಎನ್‌ಆರ್‌ಸಿ ರದ್ದತಿಗೆ ಮುಸ್ಲಿಂ ಸಂಘಟನೆಗಳ ಆಗ್ರಹ
ನಗರದಲ್ಲಿ ಜಮಾಯಿಸಿದ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ರು.ಇಲ್ಲಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ನಡೆಸಿದ ಮುಸ್ಲೀಮರು ಈದ್ಗಾ ಮೈದಾನಕ್ಕೆ ಆಗಮಿಸಿ ಸಮಾವೇಶ ನಡೆಸಿದ್ರು. ಬಳಿಕ ಮೈದಾನದಿಂದ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನ ಜಾರಿ ಮಾಡಲು ನಾವು ಬಿಡೋದಿಲ್ಲ. ಎಲ್ಲಾ ಮುಸ್ಲಿಂ ಜನಾಂಗ ಕಾಯ್ದೆಯನ್ನು ವಿರೋಧಿಸುತ್ತಿವೆ ಎಂದರು.