ನೆಲಮಂಗಲ: ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ನೆಲಮಂಗಲ ಇನ್ಸ್ಪೆಕ್ಟರ್ ಎ.ವಿ. ಕುಮಾರ್ ಮೇಲೆ ಜೂಜುಕೋರರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ನಗರದ ಚನ್ನಕೇಶವ ರಸ್ತೆಯ ಹನುಮಂತರಾಜು ಎಂಬುವರ ಮನೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ದೂರಿನ ಹಿನ್ನೆಲೆಯಲ್ಲಿ ನೆಲಮಂಗಲ ಟೌನ್ ಇನ್ಸ್ಪೆಕ್ಟರ್ ಎ.ವಿ. ಕುಮಾರ್ ನೇತೃತ್ವದಲ್ಲಿ ಪೊಲೀಸ್ ತಂಡ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದೆ.
ಜೂಜುಕೋರರಿಂದ ನೆಲಮಂಗಲ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ದಾಳಿ ವೇಳೆ ಜೂಜುಕೋರರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಇನ್ಸ್ಪೆಕ್ಟರ್ ಕುಮಾರ್ ಗಾಯಗೊಂಡಿದ್ದಾರೆ. ಗಾಯಗೊಂಡ ಕುಮಾರ್ ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಸ್ಟೇಷನ್ನಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, 11 ಜನರನ್ನ ಬಂಧಿಸಲಾಗಿದೆ ಹಾಗೂ 5 ಬೈಕ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಇಬ್ಬರು ರೆಬೆಲ್ ಶಾಸಕರ ಅನರ್ಹಗೊಳಿಸುವಂತೆ ಸ್ಪೀಕರ್ ಕಾಗೇರಿಗೆ ಜೆಡಿಎಸ್ ದೂರು