ಬೆಂಗಳೂರು:ವಾಹನ ಸವಾರರಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಸಂಚಾರಿ ಪೊಲೀಸರಿಂದ ಆರಂಭಿಸಲಾಗಿದ್ದ ನೋ ಹೆಲ್ಮೆಟ್, ನೋ ಪೆಟ್ರೋಲ್ ಅಭಿಯಾನಕ್ಕೆ ಸಿಲಿಕಾನ್ ಸಿಟಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಪರಿಣಾಮಕಾರಿಯಾಗಿ ಅಭಿಯಾನವನ್ನು ಜಾರಿ ಮಾಡಲು ಸತತ ಪ್ರಯತ್ನ ನಡೆಸುತ್ತಿರುವ ಸಿಟಿಯ ಸಂಚಾರ ಪೊಲೀಸರು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದಲೇ ಬಂಕ್ಗಳಲ್ಲಿ ಸಿಸಿಟಿವಿ ಅಳವಡಿಸಲು ಚಿಂತನೆ ನಡೆಸಿದ್ದಾರೆ. ಕಳೆದ ಸೋಮವಾರದಿಂದ ನಗರದಲ್ಲಿ ಬೈಕ್ ಸವಾರರು ಹೆಲ್ಮೆಟ್ ಹಾಕಿಕೊಂಡರೆ ಮಾತ್ರ ಪೆಟ್ರೋಲ್ ಎಂಬ ಅಲಿಖಿತ ನಿಯಮ ಜಾರಿಯಾಗಿತ್ತು. ಇದಕ್ಕೆ ಬೆಂಗಳೂರು ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್, ಪೆಟ್ರೋಲ್ ಬಂಕ್ಗಳಲ್ಲಿ ರಕ್ಷಣೆ ಹಾಗೂ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಹಲವು ಷರತ್ತು ವಿಧಿಸಿ ಅಭಿಯಾನಕ್ಕೆ ಕೈ ಜೋಡಿಸಲಾಗಿತ್ತು.